ಖ್ಯಾತ ಸ್ಯಾಕ್ಸೋಫೋನ್ ವಾದಕ ಮಚ್ಚೇಂದ್ರನಾಥ್ ಇನ್ನಿಲ್ಲ

ಖ್ಯಾತ ಸ್ಯಾಕ್ಸೋಫೋನ್ ವಾದಕ ಮಚ್ಚೇಂದ್ರನಾಥ್ ಅವರು ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದರು.

 

ಕೆಲವು ದಿನಗಳಿಂದ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಮಚ್ಚೇಂದ್ರನಾಥ್ ಅವರು ದೇಶ-ವಿದೇಶಗಳಲ್ಲಿ ಕಾರ್ಯಕ್ರಮಗಳನ್ನು ನೀಡಿದ್ದು ಸಾಕಷ್ಟು ಶಿಷ್ಯರನ್ನು ಹೊಂದಿದ್ದರು.

ಮೃತರು ಪುತ್ರಿ ಖ್ಯಾತ ಸ್ಯಾಕ್ಸೋಫೋನ್ ವಾದಕಿ ಸಿಂಧು ಭೈರವಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಕೋವಿಡ್ ಸೋಂಕಿಗೆ ಒಳಗಾಗಿದ್ದ ಅವರ ಪತ್ನಿ ಇತ್ತೀಚೆಗೆ ನಿಧನರಾಗಿದ್ದಾರೆ.

Leave A Reply

Your email address will not be published.