ಮೆಹಂದಿ ಪಾರ್ಟಿಯಲ್ಲಿ ಮಾಸ್ಕ್ ಹಾಕದ ಆರೋಪ; 8 ಮಂದಿಯ ವಿರುದ್ಧ ಪ್ರಕರಣ ದಾಖಲು
ಉಡುಪಿ ಜಿಲ್ಲೆಯ ಕುಂದಾಪುರದ ಕರ್ಕುಂಜೆ ಗ್ರಾಮದ ಅಸೋಡಿ ಎಂಬಲ್ಲಿ ಮೇ 21ರಂದು ಸಂಜೆ ನಡೆದ ಮದುವೆ ಮೆಹಂದಿ ಕಾರ್ಯಕ್ರಮದಲ್ಲಿ ಮಾಸ್ಕ್ ಇಲ್ಲದೆ ಭಾಗವಹಿಸಿದ ಎಂಟು ಮಂದಿಯ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಮ್ರಾಡಿ ನಿವಾಸಿ ಭುಜಂಗ ಶೆಟ್ಟಿ ಎಂಬವರ ಮನೆಯಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಸುಮಾರು ಏಳು ಮಂದಿ ಮಾಸ್ಕ್ ಧರಿಸದೇ ಸುರಕ್ಷಿತ ಅಂತರ ಕಾಪಾಡದೇ ಕೋವಿಡ್ ನಿಯಮ ಉಲ್ಲಂಘಿಸಿ ಭಾಗವಹಿಸಿದ್ದಾರೆ ಎನ್ನಲಾದ ವೀಡಿಯೊ ವೈರಲ್ ಆಗಿದೆ.
ಈ ವೀಡಿಯೊ ಆಧಾರದಲ್ಲಿ ಫ್ಲೈಯಿಂಗ್ ಸ್ಕ್ವಾಡ್ನ ರಾಘವೇಂದ್ರ ವರ್ಣೇಕರ್ ನೀಡಿದ ದೂರಿನಂತೆ ಭುಜಂಗ ಶೆಟ್ಟಿ ಹಾಗೂ ಇತರ ಏಳು ಮಂದಿ ವಿರುದ್ಧ ವಿಪತ್ತು ನಿರ್ವಹಣಾ ಕಾಯಿದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.