ನಿಯಮ ಉಲ್ಲಂಘಿಸಿದರೆ ಕ್ರಮ: ದ.ಕ. ಜಿಲ್ಲಾಧಿಕಾರಿ
ಮಂಗಳೂರು: ಕೋವಿಡ್ ನಿಗ್ರಹಕ್ಕಾಗಿ ರಾಜ್ಯ ಸರಕಾರದ ಆದೇಶದಂತೆ ಜೂನ್ 7ರ ಬೆಳಗ್ಗೆ 6ರವರೆಗೆ ದ.ಕ.ಜಿಲ್ಲೆಯಲ್ಲೂ ಲಾಕ್ಡೌನ್ ಮುಂದುವರಿಸಲಾಗಿದೆ. ಈ ದಿನಗಳಲ್ಲಿ ನಿಗದಿತ ಸಮಯದೊಳಗೆ ಅಗತ್ಯ ಸಾಮಗ್ರಿಗಳನ್ನು ಖರೀದಿಸಬಹುದಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51ರಿಂದ 60ರ ಅನ್ವಯ ಐಪಿಸಿ ಕಲಂ 188ರಂತೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಕಲಂ 4,5,10ರಂತೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಯವರು ಎಚ್ಚರಿಸಿದ್ದಾರೆ