ಬೆಳ್ತಂಗಡಿ | 82 ಲಕ್ಷ ರೂ ವೆಚ್ಚದ ಆಕ್ಸಿಜನ್ ಘಟಕ ಸ್ಥಾಪನೆಗೆ ಶಿಲಾನ್ಯಾಸ

‌ಬೆಳ್ತಂಗಡಿ ತಾಲೂಕಿನಲ್ಲಿ ಕೋವಿಡ್ ಸೋಂಕಿತರಿಗೆ ನೆರವಾಗುವ ದೃಷ್ಟಿಯಿಂದ, ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 82 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಆಕ್ಸಿಜನ್ ಘಟಕ ಸ್ಥಾಪನೆಗೆ ಶಿಲಾನ್ಯಾಸ ಕಾರ್ಯಕ್ರಮ ಮೇ24ರಂದು ಜರುಗಿತು.

ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ದ.ಕ ಜಿಲ್ಲೆಯ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ 82 ಲಕ್ಷ ರೂ. ವೆಚ್ಚದ ಆಕ್ಸಿಜನ್ ಘಟಕ ನಿರ್ಮಿಸಲು ಅನುಮೋದನೆ ನೀಡಿದ್ದು, ಇದಕ್ಕೆ ಕಾರಣೀಭೂತರಾದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ರವರು ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

‌ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಜೇಶ್ ರೈ, ಗೋಪಾಲಕೃಷ್ಣ, ತಾಲೂಕು ವೈದ್ಯಾಧಿಕಾರಿ ಡಾ|ಕಲಾಮದು, ತಹಶೀಲ್ದಾರ್ ಮಹೇಶ್ ಜೆ, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಇಂಜಿನಿಯರ್ ಗಳು, ನಗರ ಪಂಚಾಯತ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Leave A Reply

Your email address will not be published.