10 ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ: ಸಿಎಂ ಯಡಿಯೂರಪ್ಪ

ಕೋವಿಡ್ ಲಾಕ್‍ಡೌನ್‍ಗೆ ಸಂಬಂಧಿಸಿದಂತೆ ಈಗ ಘೋಷಿಸಿರುವ ಪ್ಯಾಕೇಜ್‍ನಲ್ಲಿ ಕೆಲವರು ಬಿಟ್ಟು ಹೋಗಿದ್ದಾರೆ. ಆದುದರಿಂದ, ಇನ್ನು 10-12 ದಿನಗಳಲ್ಲಿ ರಾಜ್ಯದ ಹಣಕಾಸಿನ ಇತಿಮಿತಿಯನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

 

ಸೋಮವಾರ ದೊಮ್ಮಲೂರಿನಲ್ಲಿರುವ ಬೆಂಗಳೂರು ಪೂರ್ವ ವಲಯದ ಬಿಬಿಎಂಪಿ ಕಾಲ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಹಣಕಾಸಿನ ಇತಿಮಿತಿಯಲ್ಲಿ ನನ್ನ ಕೆಲಸ ನಾನು ಮಾಡಿದ್ದೇನೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಧಿಕಾರದಲ್ಲಿದಾಗ ಯಾರಿಗೆ ಏನು ಕೊಟ್ಟಿದ್ದಾರೆ ಅನ್ನೋದು ಜಗತ್ತಿಗೆ ಗೊತ್ತಿದೆ ಎಂದರು.

ಈಗ ನಾನು ಘೋಷಿಸಿರುವ ಪ್ಯಾಕೇಜ್‍ನಲ್ಲಿ ಕೆಲವರು ಬಿಟ್ಟು ಹೋಗಿದ್ದಾರೆ. ಆದುದರಿಂದ, ಇನ್ನು 10-12 ದಿನಗಳಲ್ಲಿ ಅವರಿಗೂ ಪ್ಯಾಕೇಜ್ ಘೋಷಣೆ ಮಾಡಲು ಚಿಂತನೆ ನಡೆಸಲಾಗಿದೆ ಎಂದರು.

Leave A Reply

Your email address will not be published.