ದ.ಕ.ಜಿಲ್ಲೆಯಲ್ಲಿ ಮಳೆ : ಯೆಲ್ಲೋ ಅಲರ್ಟ್ ಘೋಷಣೆ
ದ.ಕ.ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆಯಿಂದ ಸಾಧಾರಣ ಮಳೆಯಾಗಿದ್ದರೆ ಅಪರಾಹ್ನ ಮತ್ತು ಮುಸ್ಸಂಜೆಯ ವೇಳೆಗೆ ಹಲವು ಕಡೆ ಉತ್ತಮ ಮಳೆ ಸುರಿದಿದೆ.
ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಯಾಸ್ ಚಂಡಮಾರುತದ ಪ್ರಭಾವದಿಂದ ಕರಾವಳಿಯಲ್ಲಿ ಮಳೆಯಾಗಿದೆ.
ಮೇ 29ರವರೆಗೂ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳವಾರ ಗರಿಷ್ಠ ತಾಪಮಾನ 29.6 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬುಧವಾರ ಮುಂಜಾನೆಯವರೆಗೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗುಡಗು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.