ಮತ್ತೆ ಆರಂಭಗೊಳ್ಳಲಿದೆ ಐಪಿಎಲ್ ಕ್ರಿಕೆಟ್ ಪಂದ್ಯ

ಕೋವಿಡ್ ಎರಡನೇ ಅಲೆಯಿಂದಾಗಿ ರದ್ದುಗೊಂಡಿದ್ದ ಐಪಿಎಲ್‌ 14ನೇ ಆವೃತ್ತಿಯನ್ನು ಮತ್ತೆ ಶುರು ಮಾಡುವ ಇರಾದೆಯನ್ನು ಬಿಸಿಸಿಐ ವ್ಯಕ್ತಪಡಿಸಿದೆ.

ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 10 ರವರೆಗೆ ಈ ಆವೃತ್ತಿಯ ಉಳಿದ ಪಂದ್ಯಗಳು ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದಕ್ಕೆ ಸಂಬಂಧಿಸಿದ ವೇಳಾಪಟ್ಟಿ ಶೀಘ್ರದಲ್ಲೇ ಹೊರಬೀಳಲಿದೆ. ಅಕ್ಟೋಬರ್ 10 ರಂದು ಐಪಿಎಲ್‌ನ 14ನೇ ಆವೃತ್ತಿಯ ಅಂತಿಮ ಪಂದ್ಯ ನಡೆಯುವ ಸಾಧ್ಯತೆ ಇದೆ. ಇದರಲ್ಲಿ 10 ಡಬಲ್ ಹೆಡರ್ ಪಂದ್ಯಗಳು, ಮತ್ತೊಂದು ಏಳು ಸಿಂಗಲ್ಸ್ ಪಂದ್ಯಗಳು ಹಾಗೂ 4 ಮುಖ್ಯ ಪಂದ್ಯಗಳನ್ನು ಒಳಗೊಂಡಿರುವ ಸಾಧ್ಯತೆ ಇದೆ.

ಈ ಬಗ್ಗೆ ಬಿಸಿಸಿಐ ಅಧಿಕೃತ ಹೇಳಿಕೆ ಬಿಡುಗಡೆಗೊಳಿಸಬೇಕಿದೆ. ಲೀಗ್‌ನ ಅಂತಿಮ ತೀರ್ಮಾನವನ್ನು ಮೇ 29 ರಂದು ನಡೆಯಲಿರುವ ವಿಶೇಷ ಸಾಮಾನ್ಯ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು ಎಂದು ತಿಳಿದುಬಂದಿದೆ.

Leave A Reply

Your email address will not be published.