ಜೂನ್ 7 ರ ಬಳಿಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮುಂದುವರಿಕೆ..?
ಬೆಂಗಳೂರು: ರಾಜ್ಯ ಸರ್ಕಾರ ಈಗಾಗಲೇ ಜೂನ್ ಏಳರ ತನಕ ಲಾಕ್ ಡೌನ್ ಘೋಷಿಸಿದ್ದು, ಇದು ಮುಂದುವರಿಯುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಇಳಿಮುಖವಾಗಿದ್ದರೂ ಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಬೆಂಗಳೂರಿನಲ್ಲಿ ಕೊರೋನಾ ಪ್ರಕರಣ 500 ಮತ್ತು ರಾಜ್ಯದಲ್ಲಿ 2000ಕ್ಕೆ ಇಳಿಕೆಯಾಗುವ ತನಕ ಲಾಕ್ ಡೌನ್ ಮುಂದುವರಿಕೆ ಸೂಕ್ತ ಎಂಬ ಸಲಹೆಯನ್ನು ಅಧಿಕಾರಿಗಳು ಸಿಎಂ ಯಡಿಯೂರಪ್ಪ ಅವರಿಗೆ ನೀಡಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ ಮುಖ್ಯಮಂತ್ರಿಗಳು ಕೊರೋನಾ ನಿರ್ವಹಣೆ ಸಂಬಂಧ ಹಿರಿಯ ಸಚಿವರ ಜತೆ ಕೂಡ ಮಾತುಕತೆ ನಡೆಸಿದ್ದಾರೆ. ಜೂನ್ ಏಳರ ಬಳಿಕ ವಾಹನ ಸಂಚಾರಕ್ಕೆ ಷರತ್ತು ಬದ್ಧ ಅನುಮತಿ ನೀಡುವ ಸಾಧ್ಯತೆಯಿದೆ. ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಲಿದ್ದು, ಕೃಷಿ ಚಟುವಟಿಕೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆಯ ಹೆಜ್ಜೆ ಇರಿಸಲು ಸರ್ಕಾರ ತೀರ್ಮಾನಿಸಿದೆ.
ಕೊರೋನಾ ನಿಯಂತ್ರಣ ಮಾಡಲು ಲಾಕ್ ಡೌನ್ ಅನಿವಾರ್ಯವೆಂದು ಈ ಹಿಂದೆಯೇ ತಜ್ಞರು ಸಲಹೆ ನೀಡಿದ್ದು, ಲಾಕ್ ಡೌನ್ ವಿಸ್ತರಿಸುವ ಎಲ್ಲಾ ಸಾಧ್ಯತೆಗಳು ಇವೆ ಎಂದು ಹೇಳಲಾಗುತ್ತಿದೆ.