ಲಾಕ್ ಡೌನ್ ಪ್ಯಾಕೇಜ್ : ಆಟೋ, ಟ್ಯಾಕ್ಸಿ, ಕ್ಯಾಬ್ ಡ್ರೈವರ್ ಗಳು ನಾಳೆಯಿಂದಲೇ ಅರ್ಜಿ ಸಲ್ಲಿಸಬಹುದು
ಲಾಕ್ ಡೌನ್ ಪ್ಯಾಕೇಜ್ ನಲ್ಲಿ ಘೋಷಿಸಿದ 3,000ರೂ. ಪರಿಹಾರ ಧನವನ್ನು ಪಡೆಯಲು ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು ನಾಳೆಯಿಂದ ಅರ್ಜಿ ಸಲ್ಲಿಸಬಹುದು.
ನಾಳೆಯಿಂದ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಸೂಕ್ತ ದಾಖಲೆಗಳನ್ನು ಸಲ್ಲಿಸಿ ಈ ಪರಿಹಾರ ಧನ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿದೆ.
ಮೇ 27ರ ಮಧ್ಯಾಹ್ನದಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆ ಪ್ರಾರಂಭವಾಗುವುದು. ಹೀಗೆ ಅರ್ಜಿ ಸಲ್ಲಿಸಿದ ಸೂಕ್ತ ಫಲಾನುಭವಿಗಳ ಅಕೌಂಟ್ ಗಳಿಗೆ ನೇರವಾಗಿ ಈ ಪರಿಹಾರ ಧನವನ್ನು ವರ್ಗಾಯಿಸಲಾಗುತ್ತದೆ.
ಎಲ್ಲಾ ಅರ್ಜಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/ ಮೂಲಕವೇ ಸಲ್ಲಿಸಬೇಕಿದೆ.
ದಿನಾಂಕ 24-04-2021ರ ವರೆಗೆ ಚಾಲನೆ ಪರವಾನಗಿ ಪ್ರಮಾಣಪತ್ರ ಹೊಂದಿರುವ ಆಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಮಾತ್ರ ಸೌಲಭ್ಯ ಸಿಗಲಿದೆ. ಒಂದು ವಾಹನಕ್ಕೆ ಒಬ್ಬ ಚಾಲಕರಿಗೆ ಮಾತ್ರ ಈ ನಗದು ಸೌಲಭ್ಯ ಸಿಗುತ್ತದೆ. ಆಧಾರ್ ಕಾರ್ಡ್, ಚಾಲನಾ ಪರವಾನಗಿ, ವಾಹನ ನೋಂದಣಿ ಸಂಖ್ಯೆ ಮೂರು ದಾಖಲೆಗಳು ಇರಬೇಕಾದ ಮುಖ್ಯ ದಾಖಲೆಗಳಾಗಿವೆ.