ಸಿಬಿಐ ಮುಖ್ಯಸ್ಥರಾಗಿ ಸುಭೋದ್ ಕುಮಾರ್ ಜೈಸ್ವಾಲ್ ನೇಮಕ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮುಖ್ಯಸ್ಥ ಸುಬೋಧ್ ಕುಮಾರ್ ಜೈಸ್ವಾಲ್ ಅವರು ಸಿಬಿಐ ನೂತನ ಮುಖ್ಯಸ್ಥರಾಗಿ ಮಂಗಳವಾರ ನೇಮಕಗೊಂಡಿದ್ದಾರೆ.

 

ಮಹಾರಾಷ್ಟ್ರದ ಪೊಲೀಸ್ ಮಹಾನಿರ್ದೇಶಕರಾಗಿಯೂ ಸೇವೆ ಸಲ್ಲಿಸಿರುವ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಎರಡು ವರ್ಷಗಳ ಅವಧಿಗೆ ಕೇಂದ್ರ ತನಿಖಾ ವಿಭಾಗದ(ಸಿಬಿಐ) ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹಾಗೂ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧುರಿ ನಡುವಿನ ಸರಣಿ ಸಭೆಗಳ ನಂತರ ಸರಕಾರದ ಅಧಿಸೂಚನೆ ಬಂದಿದೆ.

ಜೈಸ್ವಾಲ್ ಅವರು 1985 ರ ಬ್ಯಾಚ್‌ನ ಮಹಾರಾಷ್ಟ್ರ ಕೇಡರ್‌ನ ಐಪಿಎಸ್ ಅಧಿಕಾರಿ. ಪ್ರಸ್ತುತ ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆಗಳ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Leave A Reply

Your email address will not be published.