ಆತ್ಮನಿರ್ಭರ ಯೋಜನೆಯಡಿ ರಾಜ್ಯದ ಬೀದಿ ಬದಿ ವ್ಯಾಪಾರಿಗಳಿಗೆ 20 ಸಾವಿರ ಸಾಲ
ಬೆಂಗಳೂರು : ರಾಜ್ಯದ ಎಲ್ಲಾ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಆತ್ಮನಿರ್ಭರ್ ಯೋಜನೆಯಡಿಯಡಿಯಲ್ಲಿ 2ನೇ ಅವಧಿಗೆ ತಲಾ 20 ಸಾವಿರ ರೂ. ಸಾಲ ವಿತರಿಸುವಂತೆ ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕಿ ಎನ್. ಮಂಜುಶ್ರೀ ಅವರು ಆದೇಶಿಸಿದ್ದಾರೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯದಿಂದ ದೇಶದಲ್ಲಿ 20 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಈಗಾಗಲೇ ತಲಾ 10 ಸಾವಿರ ರೂ. ಸಾಲ ನೀಡಲಾಗಿದೆ.
ಸಾಲ ಪಡೆದುಕೊಂಡ ವ್ಯಾಪಾರಿಗಳು ಮಾಸಿಕ ಕಂತುಗಳನ್ನು ಆಯಾ ಬ್ಯಾಂಕ್ಗಳಿಗೆ ಪಾವತಿಸುತ್ತಿದ್ದಾರೆ. ಹಾಗಾಗಿ, ಮುಂದಿನ ದಿನಗಳಲ್ಲಿ ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತರು ಮತ್ತು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯ ಮೊದಲ ಹಂತದಲ್ಲಿ ಸಾಲ ಪಡೆದ ಶೇ.50 ಬೀದಿ ಬದಿ ವ್ಯಾಪಾರಿಗಳಿಗೆ 2ನೇ ಹಂತದಲ್ಲಿ 20 ಸಾವಿರ ರೂ. ಸಾಲ ವಿತರಣೆಗೆ ಕ್ರಮವಹಿಸುವಂತೆ ಸೂಚಿಸಿದ್ದಾರೆ.