ದಕ್ಷಿಣ ಕನ್ನಡದಲ್ಲಿ ಗುರುವಾರ 555 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ ಹಾಗೂ ಐದು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇಂದು ದಕ ದಲ್ಲಿ 1,695 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ ದಕ ಜಿಲ್ಲೆಯಲ್ಲಿಒಟ್ಟು 8954 ಸಕ್ರಿಯ ಪ್ರಕರಣಗಳಿವೆ.
ದಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 73,099 ಪಾಸಿಟಿವ್ ಕೇಸ್ ಪತ್ತೆಯಾಗಿದೆ ಮತ್ತು 889 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಹಾಗೆಯೇ ಉಡುಪಿ ಜಿಲ್ಲೆಯಲ್ಲಿ ಇಂದು 905 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ ಹಾಗೂ ಇಬ್ಬರು ಕೊರೋನಾಗೆ ಮೃತಪಟ್ಟಿದ್ದಾರೆ.
ಉಡುಪಿಯಲ್ಲಿ ಇಂದು 752 ಮಂದಿ ಡಿಸ್ಟಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 6022 ಆಕ್ಟಿವ್ ಕೇಸ್ ಗಳಿವೆ.
ರಾಜ್ಯದಲ್ಲಿ ಇಂದು ಒಟ್ಟು 24214 ಪ್ರಕರಣಗಳು ದಾಖಲಾಗಿವೆ.