ಕೋವಿಡ್ ನಿಂದ ಮೃತಪಟ್ಟ ಮಹಿಳೆ, ಹಿಂದೂ ಜಾಗರಣ ವೇದಿಕೆ ನೆಲ್ಯಾಡಿ ಘಟಕದ ವತಿಯಿಂದ ಅಂತ್ಯಕ್ರಿಯೆ
ಅರಸಿನಮಕ್ಕಿಯ ಉಡ್ಯೆರೆ ನಿವಾಸಿ ಪದ್ಮಯ ಗೌಡ ಅವರ ಪತ್ನಿ ಕುಸುಮಾವತಿ ಅವರು ಇಂದು ಬೆಳಗ್ಗೆ ಕೋವಿಡ್ ನಿಂದ ಮೃತಪಟ್ಟಿದ್ದರು. ಈ ವಿಷಯ ತಿಳಿದ ತಕ್ಷಣ ಅವರ ಅಂತ್ಯಕ್ರಿಯೆಯನ್ನು ಹಿಂದೂ ಜಾಗರಣ ವೇದಿಕೆ ನೆಲ್ಯಾಡಿಯ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತ್ ನೆಲ್ಯಾಡಿ ಇವರ ಸಹಕಾರದೊಂದಿಗೆ ಪಿಪಿಇ ಕಿಟ್ ಧರಿಸಿ, ಹಿಂದೂ ಧರ್ಮದ ವಿಧಿ ವಿಧಾನದಂತೆ ಅಂತ್ಯಸಂಸ್ಕಾರವನ್ನು ನೆರವೇರಿಸಿದರು.
ಹಿಂದೂ ಜಾಗರಣ ವೇದಿಕೆ ನೆಲ್ಯಾಡಿಯ ಕಾರ್ಯಕರ್ತರು ತಮ್ಮ ನಿಸ್ವಾರ್ಥ ಸೇವಾ ಮನೋಭಾವದಿಂದ ಮಾನವೀಯತೆ ಮೆರೆದಿದ್ದಾರೆ.
ಈ ಬಗ್ಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.