ಅನ್ ಲಾಕ್ ಪ್ರಕ್ರಿಯೆ ಶುರು | ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರದಿಂದ ಹಂತ ಹಂತದ ಅನ್ ಲಾಕ್

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿನ ಅಬ್ಬರ ಗಣನೀಯವಾಗಿ ತಗ್ಗಿದೆ.

 

ಈ ಹಿನ್ನಲೆಯಲ್ಲಿ ಇದೇ ಬರುವ ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆಯನ್ನು ಆರಂಭಿಸುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ನೇತಾರ ಮತ್ತು ದೆಹಲಿ ಮುಖ್ಯ ಮಂತ್ರಿ ಕೇಜ್ರಿವಾಲ್ ಅವರು, ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 1100 ಸೋಂಕು ಪ್ರಕರಣಗಳು ಮಾತ್ರ ವರದಿಯಾಗಿದ್ದು, ಆ ಮೂಲಕ ದೆಹಲಿಯ ಸೋಂಕು ಹರಡುವಿಕೆ ಗಣನೀಯವಾಗಿ ಕುಗ್ಗಿದೆ ಎಂದರು. ದೆಹಲಿಯಲ್ಲಿ ಈಗ ಸಕಾರಾತ್ಮಕ ದರ ಶೇ.1.5 ಕ್ಕೆ ಇಳಿಕೆಯಾಗಿದ್ದು, ಇದು ಉತ್ತಮ ಸಾಧನೆ ಎಂದಿದ್ದಾರೆ. ಹೀಗಾಗಿ ಹಾಲಿ ಚಾಲ್ತಿಯಲ್ಲಿ ಇರುವ ಲಾಕ್ ಡೌನ್ ಅನ್ನು ಸೋಮವಾರಕ್ಕೆ ಅಂತ್ಯಗೊಳಿಸಲಿದ್ದಾರೆ.

ಬರುವ ಸೋಮವಾರದಿಂದ ದೆಹಲಿಯಲ್ಲಿ ಅನ್ ಲಾಕ್ ಪ್ರಕ್ರಿಯೆಯನ್ನು ನಿಧಾನವಾಗಿ ಆರಂಭಿಸಲಾಗುತ್ತದೆ. ಸೋಮವಾರ ಬೆಳಗ್ಗೆ 5 ಗಂಟೆಗೆ ಲಾಕ್ ಡೌನ್ ಅಂತ್ಯವಾಗಲಿದ್ದು, ಪ್ರಮುಖವಾಗಿ ಅನ್ ಲಾಕ್ ಪ್ರಕ್ರಿಯೆ ಮೊದಲ ಭಾಗವಾಗಿ ಕಟ್ಟಡ ನಿರ್ಮಾಣ ಚಟುವಟಿಕೆ ಮತ್ತು ಕಾರ್ಖಾನೆಗಳನ್ನು ಮೊದಲು ತೆರೆಯಲಾಗುತ್ತದೆ. ಇದರಿಂದ ದಿನಗೂಲಿ ಕಾರ್ಮಿಕರಿಗೆ ನೆರವಾಗುತ್ತದೆ ಎಂದು ಅವರು ಹೇಳಿದರು.

Leave A Reply

Your email address will not be published.