ದ.ಕ. ಜಿಲ್ಲೆ ಶುಕ್ರವಾರದ ಕೋವಿಡ್‌ ವರದಿ : 799 ಮಂದಿಗೆ ಪಾಸಿಟಿವ್, 5 ಮಂದಿ ಬಲಿ

ದ.ಕ. ಜಿಲ್ಲೆಯಲ್ಲಿ ಶುಕ್ರವಾರ 5 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 894ಕ್ಕೇರಿದೆ.

799 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ.
ಜಿಲ್ಲೆಯಲ್ಲಿ ಈವರಗೆ 8,41,914 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,68,016 ಮಂದಿಯ ವರದಿ ನೆಗೆಟಿವ್ ಬಂದಿದೆ.

ಒಟ್ಟು 73,898 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಶುಕ್ರವಾರ 745 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವುದರೊಂದಿಗೆ ಈವರೆಗೆ ಗುಣಮುಖರಾದವರ ಸಂಖ್ಯೆ 64,001ಕ್ಕೇರಿದೆ.

ಸದ್ಯ ಜಿಲ್ಲೆಯಲ್ಲಿ 9,003 ಸಕ್ರಿಯ ಪ್ರಕರಣವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Leave A Reply

Your email address will not be published.