ಜೂ.30ರವರೆಗೆ ನಿರ್ಬಂಧಗಳನ್ನು ಮುಂದುವರೆಸುವಂತೆ ಕೇಂದ್ರ ಗೃಹಸಚಿವಾಲಯ ಸೂಚನೆ

 

ಕೊರೊನಾ ಎರಡನೇ ಅಲೆ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಸದ್ಯ ಜಾರಿಯಲ್ಲಿರುವ ನಿರ್ಬಂಧಗಳನ್ನು ಜೂನ್ 30ರ ತನಕ ಮುಂದುವರಿಕೆಗೆ ಕೇಂದ್ರ ಗೃಹಸಚಿವಾಲಯ ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಈ ಕುರಿತು ಆದೇಶ ಹೊರಡಿಸಿದ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲ, ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶದ ಆಡಳಿತ ಈಗಾಗಲೇ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಹೆಚ್ಚಿನ ರಾಜ್ಯಗಳಲ್ಲಿ ಕೋರೋನಾ ಸೋಂಕಿಗೊಳಗಾಗಿ ಜವ ಸಾವಿಗೀಡಾಗುತ್ತಿರುವ ಸಂಖ್ಯೆ ಹಾಗು ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುವವರೆಗೂ ಸದ್ಯ ಇರುವ ಎಲ್ಲಾ ನಿರ್ಬಂಧಗಳನ್ನು ಜೂನ್ ತಿಂಗಳ 30ರವರೆಗೆ ಮುಂದುವರಿಸುವಂತೆ ಎಲ್ಲಾ ರಾಜ್ಯ ಸರಕಾರಗಳಿಗೆ ಆದೇಶಿಸಲಾಗಿದೆ.

Leave A Reply

Your email address will not be published.