ಮಂಗಳೂರು :ಅಕ್ರಮ ಚಿನ್ನ ಸಾಗಾಟ|ಆರೋಪಿಯ ಬಂಧನ

ಮಂಗಳೂರು :ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಭಟ್ಕಳದ ಸಿಬ್ಲಿಕ್ ಮಿಕ್ಟಿಮ್ ಹುಸೈನ್ ಎಂಬ ವ್ಯಕ್ತಿಯೋರ್ವ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದು,ತಪಾಸಾಣೆ ವೇಳೆ ಗೋಲ್ಡ್ ಸ್ಮಗ್ಲಿಂಗ್ ಮಾಡುವುದು ತಿಳಿದು ಬಂದಿದೆ.

ಏರ್ ಇಂಡಿಯಾ ವಿಮಾನದಲ್ಲಿ ದುಬೈಯಿಂದ ಮಂಗಳೂರಿಗೆ ಬಂದಿದ್ದರಿಂದ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದರು. ಈ ಸಂದರ್ಭದಲ್ಲಿ ವ್ಯಕ್ತಿಯ ಗುದದ್ವಾರದಲ್ಲಿ ಸುಮಾರು ರೂ.13.2 ಲಕ್ಷ ರೂ ಮೌಲ್ಯದ ಚಿನ್ನವು ದೊರೆತಿದ್ದು,ಸದ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Leave A Reply

Your email address will not be published.