ಕಲ್ಲುಗುಂಡಿ : ರಸ್ತೆ ದಾಟುವಾಗ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವು

ಸುಳ್ಯ : ರಸ್ತೆ ದಾಟುವಾಗ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದ.ಕ.ದ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಕಲ್ಲುಗುಂಡಿ ಜನತಾ ಕಾಲೊನಿ ನಿವಾಸಿ ಚಂದ್ರಶೇಖರ(50) ಎಂದು ಗುರುತಿಸಲಾಗಿದೆ.

ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟೆಂಪೋವೊಂದು ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಈ ಅಪಘಾತ ನಡೆದಿದ್ದು,
ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಚಂದ್ರಶೇಖರ ರ ತಲೆಗೆ ಹಾಗೂ ಬಲಗೈಗೆ ಗಂಭೀರ ಗಾಯವಾಗಿದ್ದು, ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಪರೀಕ್ಷಿಸಿದಾಗ ವ್ಯಕ್ತಿಯು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಟೆಂಪೋ ಚಾಲಕನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.