ಜೂನ್ 7 ರ ಬಳಿಕ ಕೂಡಾ ಲಾಕ್ ಡೌನ್ ಮುಂದುವರಿಕೆ ಸಾಧ್ಯತೆ ದಟ್ಟ | ಸುಳಿವು ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ರಾಜ್ಯದಲ್ಲಿ ಜೂನ್ ಏಳರ ಬಳಿಕ ಕೂಡಾ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಯ ದಟ್ಟ ಸುಳಿವು ಗೋಚರ ಆಗಿದೆ.

ಈ ಸುಳಿವನ್ನು ಇದೀಗ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ನೀಡಿದ್ದಾರೆ.

ನಮ್ಮ ರಾಜ್ಯದಲ್ಲಿ ಸೋಂಕು ಹರಡುವ ಪರಿಸ್ಥಿತಿ ಸುಧಾರಿಸಿದೆ. ಆದರೆ ಇನ್ನೂ ಕೂಡ ಇನ್ನೂ ನಮ್ಮ ನಿಯಂತ್ರಣಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚರಿಕೆಯಿಂದ ಮುಂದೆ ಹೆಜ್ಜೆ ಇಡಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಜಿಲ್ಲಾಧಿಕಾರಿಗಳ ಜತೆ ಸಮಾಲೋಚನೆ ನಡೆಸುತ್ತಿದ್ದು, ಎಲ್ಲಾ ಜಿಲ್ಲೆಗಳಿಂದ ವರದಿ ತರಿಸಿಕೊಳ್ಳುತ್ತಿದ್ದಾರೆ ಮತ್ತು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಆ ನಂತರ ಸ್ಪಷ್ಟ ನಿರ್ಧಾರ ಮೂಡಿಬರುವ ನಿರೀಕ್ಷೆ ಇದೆ.

ರಾಜ್ಯದಲ್ಲಿ ಕೆಲವು ದಿನಗಳ ಮಟ್ಟಿಗೆ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆ ಹೆಚ್ಚಾಗಿದೆ. ತಜ್ಞರು ಕೂಡಾ ಅದಕ್ಕೆ ಪೂರಕವಾದ ಸಲಹೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.

Leave A Reply

Your email address will not be published.