ಪುತ್ತೂರು ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಎಂ.ಬಿ.ವಿಶ್ವನಾಥ ರೈ

ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ.ಬಿ.ವಿಶ್ವನಾಥ ರೈ ಅವರನ್ನು ಆಯ್ಕೆ ಮಾಡಲಾಗಿದೆ.

ಈ ನೇಮಕಾತಿ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ರವರೊಂದಿಗೆ ಜಿಲ್ಲಾಧ್ಯಕ್ಷರಾದ ಕೆ.ಹರೀಶ್ ಕುಮಾರ್, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಮಾಜಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೇಮನಾಥ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾ ಹೇಮನಾಥ್ ಶೆಟ್ಟಿ ಮತ್ತು ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಅಲಿ ಇವರನ್ನು ಬರ ಮಾಡಿ ಚರ್ಚಿಸಿ, ಪುತ್ತೂರುನಲ್ಲಿ ಪಕ್ಷವನ್ನು ಸಂಘಟಿಸಿ ಮುಂದಿನ ಚುನಾವಣೆಗೆ ಸಜ್ಜಾಗುವಂತೆ ಒಮ್ಮತದಿಂದ ಕಾರ್ಯನಿರ್ವಹಿಸಲು ಸೂಚಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರನ್ನಾಗಿ ಎಂ.ಬಿ.ವಿಶ್ವನಾಥ ರೈ ಅವರನ್ನು ನೇಮಿಸಿ ಆದೇಶಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave A Reply

Your email address will not be published.