ನದಿಯಲ್ಲಿ ಈಜಲು ಹೋದ ನಾಲ್ಕು ಮಕ್ಕಳು ನೀರುಪಾಲು
ವಿಜಯಪುರ: ಭೀಮಾ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರು ಪಾಲಾದ ದುರ್ಘಟನೆ ಮಹಾರಾಷ್ಟ್ರ ಗಡಿಪ್ರದೇಶದಲ್ಲಿ ದಕ್ಷಿಣ ಸೋಲಾಪುರ ತಾಲೂಕಿನ ಲವಗಿ ಗ್ರಾಮದಲ್ಲಿ ನಡೆದಿದೆ. ಶವಗಳಿಗೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧಕಾರ್ಯ ನಡೆಸಿದ್ದಾರೆ.
ಲವಗಿ ಗ್ರಾಮದ ಶಿವಾನಂದ ಪಾರ್ಶೆಟ್ಟಿ ಅವರ ಮಕ್ಕಳಾದ ಆರತಿ (13), ವಿಠ್ಠಲ (10), ಹಾಗೂ ಶಿವಾಜಿ ತಾನವಡೆ ಎಂಬುವವರ ಮಕ್ಕಳಾದ ಸಮೀಕ್ಷಾ (14), ಅರ್ಪಿತಾ(13) ನೀರುಪಾಲಾದ ಮಕ್ಕಳು.
ಹಿರಿಯರು ಕೆಲಸದಲ್ಲಿ ತೊಡಗಿದ್ದಾಗ ಮಕ್ಕಳು ಭೀಮಾ ನದಿಗೆ ಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಹರಿವಿದ್ದ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿ ಹೋಗಿದ್ದಾರೆ. ಮಹಾರಾಷ್ಟ್ರದ ಮಂದ್ರೂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.