ಶೈಕ್ಷಣಿಕ ವರ್ಷಾರಂಭದ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ | ಜೂ.15ರಿಂದ ಶಾಲಾರಂಭ ?

ಕರ್ನಾಟಕ ರಾಜ್ಯ ಪಠ್ಯಕ್ರಮ ಅನುಸರಿಸುವ ಶಾಲೆಗಳಿಗೆ 2020-21ನೇ ಸಾಲಿನ ಬೇಸಿಗೆ ರಜೆ ಮತ್ತು 2021-22ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ಕುರಿತು (ತಾತ್ಕಾಲಿಕ) ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಕೋವಿಡ್-19ರ ಹಿನ್ನಲೆಯಲ್ಲಿ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ಮುಂದೂಡಲಾಗಿದೆ.

07-06-2021ರ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಿಸಿ, ಆದೇಶಿಸಲಾಗಿದೆ. ಈ ಅಂಶಗಳ ಹಿನ್ನಲೆಯಲ್ಲಿ ಶಾಲೆಗಳಿಗೆ 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಈ ಹಿಂದೆ ನಿಗದಿ ಪಡಿಸಿರುವುದನ್ನು ಮಾರ್ಪಡಿಸಿದೆ.

2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜೂ.14ರ ವರೆಗೆ ನೀಡಿದ್ದು, ಜೂ.15ರಿಂದ 2021-22ನೇ ಸಾಲಿನ ಪ್ರೌಢಶಾಲೆಗಳ 8, 9 ಮತ್ತು 10ನೇ ತರಗತಿಗಳ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿದೆ.

ಈ ವೇಳಾಪಟ್ಟಿಯು ತಾತ್ಕಾಲಿಕವಾಗಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಪರಿಷ್ಕರಣೆಗೆ ಒಳಪಟ್ಟಿದೆ.

ಕಾಲಕಾಲಕ್ಕೆ ಸರ್ಕಾರ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆಗಳನ್ನು ಆಯಾ ಶಾಲೆಗಳು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಆದೇಶಿಸಿದೆ.


ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆ ನಿಗದಿಪಡಿಸಿದ ಬೇಸಿಗೆ ರಜಾ ದಿನಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರೌಢಶಾಲೆಗಳಿಗೆ ಜೂ.14ರ ವರೆಗೆ ಬೇಸಿಗೆ ರಜೆ ವಿಸ್ತರಿಸಲಾಗಿದೆ.

Leave A Reply

Your email address will not be published.