ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಸರ್ಕಾರದಿಂದ ಲಾಕ್’ಡೌನ್ ಮುಂದುವರಿಕೆ!??

ಮಹಾಮಾರಿಯ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಈಗಾಗಲೇ ಸರ್ಕಾರ ಜೂನ್ 7ರ ಬೆಳಗ್ಗೆ 6ಗಂಟೆಯ ವರೆಗೆ ಲಾಕ್‍ಡೌನ್ ಹೇರಿದ್ದು, ಅಗತ್ಯ ಬಿದ್ದರೆ ಆ ಬಳಿಕವೂ ಇನ್ನೂ ಹದಿನಾಲ್ಕು ದಿನಗಳ ಕಾಲ ಲಾಕ್‍ಡೌನ್ ವಿಸ್ತರಣೆಯಾಗಲಿದೆ ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದೆ.


ಕೇಂದ್ರ ಸರಕಾರದ ನಿರ್ದೇಶನದ ಪ್ರಕಾರ ಸೋಂಕು ಸಂಪೂರ್ಣ ನಿಯಂತ್ರಣಗೊಳ್ಳುವ ದೃಷ್ಟಿಯಿಂದ ಜೂನ್ ಅಂತ್ಯದವರೆಗೆ ಲಾಕ್‍ಡೌನ್ ಸೇರಿದಂತೆ ಇತರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ರಾಜ್ಯ ಸರಕಾರಗಳಿಗೆ ಅದೇಶಿಸಿತ್ತು.ಜೊತೆಗೆ ಈಗಾಗಲೇ ರಾಜ್ಯದ ಗ್ರಾಮೀಣ ಪ್ರದೇಶಕ್ಕೆ ಸೋಂಕು ಹಬ್ಬಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ಇನ್ನೂ 14 ದಿನಗಳ ಕಾಲ ಲಾಕ್‍ಡೌನ್ ಮಾಡುವುದು ಸೂಕ್ತ ಎಂದು ತಜ್ಞರ ಸಮಿತಿ ಅಭಿಪ್ರಾಯಪಟ್ಟಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಸಮಿತಿಯು ಆರೋಗ್ಯ ಸಚಿವ ಡಾ.ಸುಧಾಕರ್ ಅವರಿಗೆ ವರದಿ ನೀಡಿದ್ದು , ಅವರು ಮುಖ್ಯಮಂತ್ರಿಯಡಿಯೂರಪ್ಪನವರಿಗೆ ನೀಡಿದ್ದಾರೆ.

ಜೂನ್ 5 ಅಥವಾ 6ಕ್ಕೆ ತಜ್ಞರು ಹಾಗೂ ಸಚಿವರೊಂದಿಗಿನ ಸಮಾಲೋಚನೆಯ ಬಳಿಕ ಲಾಕ್‍ಡೌನ್ ವಿಸ್ತರಣೆ ಕುರಿತು ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ತಿಳಿಸಿದ್ದಾರೆ. ತಜ್ಞರ ಸಮಿತಿ ಶಿಫಾರಸ್ಸಿನ ಹಿನ್ನೆಲೆಯಲ್ಲಿ ಇನ್ನೂ 14 ದಿನಗಳ ಕಾಲ ಲಾಕ್‍ಡೌನ್ ವಿಸ್ತರಣೆ ಸಾಧ್ಯತೆ ಹೆಚ್ಚಿದೆ.

Leave A Reply

Your email address will not be published.