ಸಿಬಿಎಸ್ಇ 12ನೇ ತರಗತಿಯ ಪರೀಕ್ಷೆಗಳು ರದ್ದು | ಮೋದಿ ಸರ್ಕಾರದ ಮಹತ್ವದ ಸಭೆಯ ನಂತರ ಘೋಷಣೆ

ನವದೆಹಲಿ: ಕೋವಿಡ್ ಸಾಂಕ್ರಾಮಿಕದ ಮಧ್ಯೆ 2021 ರ ಸಾಲಿನ ಸಿಬಿಎಸ್ಇ 12 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಿರ್ಧರಿಸಿದೆ. ಎಲ್ಲಾ ಮಧ್ಯಸ್ಥಗಾರರೊಂದಿಗೆ ವ್ಯಾಪಕ ಚರ್ಚೆಯ ನಂತರ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿದುಬಂದಿದೆ.

ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆಗೆ ಎರಡು ದಿನಗಳ ಮುಂಚಿತವಾಗಿ ಈ ಸಭೆ ನಡೆದಿದೆ. ಈ ಸಂದರ್ಭದಲ್ಲಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿದ ಮನವಿಗೆ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಪ್ರಕಟಿಸಿದೆ.

ಸಿಬಿಎಸ್ಇ 12 ನೇ ತರಗತಿ ಜೊತೆಗೆ ಐಸಿಎಸ್ ಪರೀಕ್ಷೆಗಳನ್ನು ಕೂಡ ರದ್ದು ಮಾಡಲಾಗಿದೆ.

Leave A Reply

Your email address will not be published.