ಲಾಕ್ಡೌನ್ನಿಂದ ಮುಚ್ಚಿದ ಬಟ್ಟೆ ಅಂಗಡಿ | ಕೆಲಸ ಇಲ್ಲದ ಚಿಂತೆಯಲ್ಲಿ ಆತ್ಮಹತ್ಯೆ
ಲಾಕ್ಡೌನ್ನಲ್ಲಿ ಕೆಲಸ ಇಲ್ಲದ ಚಿಂತೆಯಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಾರ್ಕಳ ತಾಲೂಕಿನ ಕುಕ್ಕುಂದೂರು ಜೋಡುರಸ್ತೆಯ ನಿವಾಸಿ ರಘುನಾಥ ಕಾಮತ್(64) ಎಂದು ಗುರುತಿಸಲಾಗಿದೆ.
ಉಡುಪಿಯ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ರಘುನಾಥ ಕಾಮತ್ ಅವರು ಲಾಕ್ಡೌನ್ನಿಂದ ಕೆಲಸ ಇಲ್ಲದೇ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.
ಈ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಅವರು ಮೇ 27ರಂದು ಮನೆಯಿಂದ ಹೊರಗಡೆ ಹೋದವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರು ಮೇ 30ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿ ಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.