ವಿಟ್ಲ | ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು

ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಬದಿಯಲ್ಲಿರುವ ಹೊಂಡಕ್ಕೆ ಉರುಳಿದ ಘಟನೆ ವಿಟ್ಲ ಸಮೀಪದ ಅಜ್ಜಿನಡ್ಕ ಎಂಬಲ್ಲಿ ಸಂಭವಿಸಿದೆ.

ಬೈರಿಕಟ್ಟೆಯಿಂದ ಪುಣಚ ಕಡೆಗೆ ತೆರಳುತ್ತಿದ್ದ ವೇಳೆ ಅಜ್ಜಿನಡ್ಕ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು, ಮನೆಯೊಂದರ ಎದುರಿನ ಹೊಂಡಕ್ಕೆ ಉರುಳಿ ಬಿದ್ದಿದೆ. ಚಾಲಕ ಮತ್ತು ಸಹಪ್ರಯಾಣಿಕ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave A Reply

Your email address will not be published.