ಬೆಂಗಳೂರು : ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಸ್ತರಣೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಡಾಲರ್ಸ್ ಕಾಲೋನಿಯ ಧವಳಗಿರಿಯ ಮನೆ ನವೀಕರಣ ಹಿನ್ನೆಲೆ ಇಂದು ಮನೆ ನೋಡಲು ಸಿಎಂ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳು ಲಾಕ್‍ಡೌನ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಕೊರೊನಾ ನಿಯಂತ್ರಣವಾಗದ ಹಿನ್ನೆಲೆಯಲ್ಲಿ ಜೂನ್ 7 ರ ನಂತರವೂ ಲಾಕ್‍ಡೌನ್ ವಿಸ್ತರಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಉತ್ತರಿಸಿದರು.
ಲಾಕ್‍ಡೌನ್ ಎಷ್ಟು ದಿನ ವಿಸ್ತರಣೆಯಾಗಲಿದೆ ಸಂಜೆಯ ಹೊತ್ತಿಗೆ ತಿಳಿದು ಬರಲಿದೆ.
ರಫ್ತು ಆಧಾರಿತ ಸೇವೆ ನಾಳೆಯಿಂದ ಆರಂಭವಾಗಲಿದೆ. ಲಾಕ್ ಡೌನ್ ಸಡಿಲ ಹೇಗೆ ಮಾಡಬೇಕು ಎನ್ನುವುದರ ಬಗ್ಗೆಯೂ ಚರ್ಚೆ ಮಾಡುತ್ತೇವೆ. ವಿಸ್ತರಣೆ ಮಾಡಿ ಬಿಗಿ ಕ್ರಮ ತೆಗೆದುಕೊಂಡು ಹೇಗೆ ಹೋಗಬೇಕು ಎಂಬುದರ ಬಗ್ಗೆ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಇಂದು ಸಂಜೆ ನಡೆಯುವ ಸಭೆಯ ನಂತರ, ಸಂಜೆ 6 ಗಂಟೆಗೆ ಹೊಸ ಮಾರ್ಗಸೂಚಿ ಪ್ರಕಟವಾಗಲಿದೆ. ಹಲವು ಸದಿಲಿಕೆಗಳು ಹೊಸ ಮಾರ್ಗಸೂಚಿಯನ್ನು ಇರಲಿದೆ.
ಹಳ್ಳಿಗಳಲ್ಲಿ ಇನ್ನೂ ಕೊರೊನಾ ಕಡಿಮೆ ಆಗಿಲ್ಲ. ಯಾವ ವಲಯಕ್ಕೆ ಅನುಮತಿ ನೀಡಬೇಕು ಎನ್ನುವುದರ ಬಗ್ಗೆ ಇಂದು ಸಂಜೆ ತೀರ್ಮಾನ ಮಾಡುತ್ತೇವೆ. ಸದ್ಯಕ್ಕೆ ಕೈಗಾರಿಕೆಗಳ ರಫ್ತು ಘಟಕಗಳಿಗೆ ಮಾತ್ರ ಅನುಮತಿ ನೀಡುತ್ತೇವೆ ಎಂದು ಹೇಳಿದರು.
ಧಾರಾವಾಹಿಗಳ ಚಿತ್ರೀಕರಣಕ್ಕೆ ಅನುಮತಿ ದೊರಕುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.