ಕನ್ನಡಿಗರ ಮನ ಗೆದ್ದ ಹಿರಿಯ ನಟಿ ಬಿ.ಜಯಾ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗ, ಕಿರುತೆರೆಯ ಹಿರಿಯ ನಟಿ ಬಿ.ಜಯಾ (75 ) ಜೂನ್ 3ರಂದು ನಿಧನ ಹೊಂದಿದರು.

ಪಾರ್ಶ್ವವಾಯುಗೆ ತುತ್ತಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮಧ್ಯಾಹ್ನ ನಿಧನರಾದರು.

ಮೂರು ತಲೆಮಾರಿನ ನಟ, ನಟಿಯರೊಂದಿಗೆ ಅಭಿನಯಿಸಿರುವ ಹೆಗ್ಗಳಿಕೆ ಜಯಾ ಅವರದು.

ನಿರಂತರ ಆರು ದಶಕಗಳ ಕಾಲ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದ ಅವರು, 350ಕ್ಕೂ ಹೆಚ್ಚು ಸಿನಿಮಾಗಳು, ಹಲವಾರು ಧಾರಾವಾಹಿಗಳ ಸಾವಿರಾರು ಸಂಚಿಕೆಗಳಲ್ಲಿ ಅಭಿನಯಿಸಿ ಕನ್ನಡಿಗರ ಮನ ಗೆದ್ದಿದ್ದರು.

ಜಯಾ ಅವರ ನಿಧನಕ್ಕೆ‌ಚಿತ್ರರಂಗ ಕಂಬನಿ ಮಿಡಿದಿದೆ.

Leave A Reply

Your email address will not be published.