ಪುತ್ತೂರು : ಲಾರಿ ಚಾಲಕನಿಗೆ ಹಲ್ಲೆಗೈದು ಪರಾರಿಯಾಗಲೆತ್ನಿಸಿದ ತಂಡವನ್ನು ವಶಕ್ಕೆ ಪಡೆಯುವಾಗ ಪೊಲೀಸರ ಮೇಲೂ ಹಲ್ಲೆ | ಆರೋಪಿಗಳ ಬಂಧನ | ಎಸ್ಪಿ ಬೇಟಿ

ಉಪ್ಪಿನಂಗಡಿ : ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಪೆರಾಜೆ ಎಂಬಲ್ಲಿ ಲಾರಿ ಚಾಲಕನಿಗೆ ಹಲ್ಲೆ ನಡೆಸಿ ಕಾರಿನಲ್ಲಿ ಪರಾರಿಯಾಗುತ್ತಿದ್ದ ತಂಡವೊಂದನ್ನು ಉಪ್ಪಿನಂಗಡಿ ನೆಕ್ಕಿಲಾಡಿ ಚೆಕ್‌ಪಾಯಿಂಟ್ ಪೊಲೀಸರು ತಡೆಯಲೆತ್ನಿಸಿದಾಗ ಅಲ್ಲಿಂದ ತಪ್ಪಿಸಿಕೊಂಡು ಕೆಮ್ಮಾಯಿಯಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಲು ಮುಂದಾದ ವೇಳೆ ಮಾತಿನ ಚಕಮಕಿ ನಡೆಸಿದ ತಂಡ ಪೊಲೀಸರ ಮೇಲೆ ಹಲ್ಲೆ ನಡೆಸಿದ ಬಗ್ಗೆ ವರದಿಯಾಗಿದೆ.

ಈ ಘಟನೆ ಜೂ.2ರಂದು ನಡೆದಿದ್ದು,ಘಟನೆಗೆ ಸಂಬಂಧಿಸಿದಂತೆ ಕಾರಿನಲ್ಲಿದ್ದವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು,ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಸಂದರ್ಭ ಓರ್ವ ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎನ್ನಲಾಗಿದೆ.

ಇದೀಗ ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿ ಜೂ.3ರಂದು ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿರುವ ಎಸ್ಪಿ ಹೃಷಿಕೇಶ್ ಸೋನಾವಣೆ ಅವರು ಮಾತನಾಡಿ, ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆ ಮಾಡಲಾಗುತ್ತಿದೆ. ಉಳಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗುವುದು ಎಂದು ವಿವರಿಸಿದರು.

Leave A Reply

Your email address will not be published.