ಬೆಳ್ತಂಗಡಿ | ಅರಣ್ಯ ವೀಕ್ಷಕ ಬಾಲಕೃಷ್ಣ ಗೌಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ ತಾಲೂಕು ಅರಣ್ಯ ವಲಯದ ಅರಣ್ಯ ವೀಕ್ಷಕ ಬಾಲಕೃಷ್ಣ ಗೌಡ (40.ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕಳಿಯ ಗ್ರಾಮದ ಗೇರುಕಟ್ಟೆ ಪಲ್ಲಿದಳಿಕೆ ನಿವಾಸಿ, ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ಅರಣ್ಯ ವೀಕ್ಷಕ ಬಾಲಕೃಷ್ಣ ಗೌಡ (40.ವ) ರವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.
ಬಾಲಕೃಷ್ಣ ಗೌಡರವರು ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಲ್ಲಿ ಅರಣ್ಯ ವೀಕ್ಷಕರಾಗಿ ಕರ್ತವ್ಯನಿರ್ವಹಿಸುತ್ತಿದ್ದು, ತಡವಾಗಿ, ಇತ್ತೀಚೆಗಷ್ಟೇ ವಿವಾಹವಾಗಿದ್ದರು.
ಇಂದು ಬೆಳಿಗ್ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ಇನ್ನಷ್ಟೇ ತಿಳಿದುಬರಬೇಕಿದೆ.