ಕೋವಿಡ್ ನಿಯಂತ್ರಣದ ಮೇಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಭವಿಷ್ಯ -ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಕೋವಿಡ್ ನಿಯಂತ್ರಣವಾಗದಿದ್ದಲ್ಲಿ ಎಸೆಸೆಲ್ಸಿ ಪರೀಕ್ಷೆಯನ್ನೂ ರದ್ದು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

 

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿರುವ ಬಗ್ಗೆ ಶಿಕ್ಷಣ ಸಚಿವ ಸುರೇಶಕುಮಾರ್ ವಿವರಣೆಯನ್ನು ನೀಡಿದ್ದಾರೆ. ಅದರಂತೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸುವ ಬಗ್ಗೆ ವಿವರಿಸಿದ್ದು,

ಆದರೆ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದರೆ ಎಸೆಸೆಲ್ಸಿ ಪರೀಕ್ಷೆ ನಡೆಸುತ್ತೇವೆ. ಇಲ್ಲವಾದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರೀತಿಯಲ್ಲಿ ಎಸೆಸೆಲ್ಸಿ ಪರೀಕ್ಷೆಯನ್ನು ರದ್ದು ಮಾಡುವ ಬಗ್ಗೆ ಕ್ರಮ ಕೈಗೊಳ್ಳುವುದು ಎಂದು ಸ್ಪಷ್ಟನೆ ನೀಡಿದರು.

Leave A Reply

Your email address will not be published.