ಮರ್ಕಂಜ : ಕಾನೂನು ವಿದ್ಯಾರ್ಥಿ ಆತ್ಮಹತ್ಯೆ

ಪುತ್ತೂರು; ಪುತ್ತೂರಿನ‌ ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ಪದವಿ ವಿದ್ಯಾರ್ಥಿ ಸುಳ್ಯದ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಜೂ.4ರಂದು ವರದಿಯಾಗಿದೆ.

 

ಸುಳ್ಯ ತಾಲೂಕು ಮರ್ಕಂಜ ಗ್ರಾಮದ ದೇಶಕೋಡಿ ದಿ.ರಘುನಾಥ ಪುರಷರವರ ಪುತ್ರ. ನಿತೇಶ್ ಎಂ.ಆರ್(30.ವ) ಆತ್ಮಹತ್ಯೆ ಮಾಡಿಕೊಂಡವರು. ಕಾಲೇಜು ದಿನಗಳಲ್ಲಿ ಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದರು. ಲಾಕ್ ಡೌನ್ ನಿಂದಾಗಿ ಮನೆಯಲ್ಲಿಯೇ ಇದ್ದು ನಿತ್ಯ ಆನ್ ಲೈನ್ ತರಗತಿಯಲ್ಲಿ ಭಾಗಿಯಾಗುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಸಹೋದರರಾದ ರಾಜೇಶ್ ನಾಥ್, ಸತೀಶ್, ಗಿರೀಶ್, ಮಹೇಶ್, ಪ್ರಕಾಶ್ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

Leave A Reply

Your email address will not be published.