ಮಾನವೀಯತೆ ಮೆರೆದ ಯುವಮೋರ್ಚಾ ಮುಖಂಡ ಸಹಜ್ ರೈ

ಪುತ್ತೂರು: ಕೊರೋನಾ ವೈರಸ್ ತಡೆಗಟ್ಟುವುದಕ್ಕಾಗಿ ಲಾಕ್ ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಹಲವಾರು ಬಡಕುಟುಂಬಗಳು ಸಂಕಷ್ಟ ಅನುಭವಿಸುತ್ತಿದ್ದು,ಅಂತಹ ಅರ್ಹ ಫಲಾನುಭವಿ ಕುಟುಂಬಗಳಿಗೆ ಆಹಾರದ ಕಿಟ್ ವಿತರಿಸುವ ಮೂಲಕ ಉದ್ಯಮಿ,ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸಹಜ್ ರೈ ಬಳಜ್ಜರವರು ಮಾನವೀಯತೆ ಮೆರೆದಿದ್ದಾರೆ.

ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ದಿನಬಳಕೆಯ ಆಹಾರದ ಕಿಟ್ ವಿತರಣಾ ಕಾರ್ಯಕ್ರಮವು ಈಶ್ವರಮಂಗಲದ ಮೇನಾಲದ ಜಯಹರಿ ಫ್ಯೂಯೆಲ್ ಸ್ಟೇಷನ್ ನಲ್ಲಿ ನಡೆಯಿತು.

ಶಾಸಕ ಸಂಜೀವ ಮಠಂದೂರುರವರು ಫಲಾನುಭವಿಗಳಿಗೆ ಸಾಂಕೇತಿಕವಾಗಿ ಆಹಾರದ ಕಿಟ್ ವಿತರಿಸಿದರು.ಬಳಿಕ ಮಾತನಾಡಿದ ಶಾಸಕರು ತನ್ನ ಉದ್ಯಮ ಕ್ಷೇತ್ರವಾದ ಈಶ್ವರಮಂಗಲದ ಜನರ ಕಷ್ಟಗಳಿಗೆ ಸ್ಪಂದಿಸಿದ್ದು ಶ್ಲಾಘನೀಯ ಕಾರ್ಯವಾಗಿದ್ದು,ಕೋವೀಡ್ ನ ಸಂಕಷ್ಟದ ಸಮಯದಲ್ಲಿ ಅರ್ಹ ಬಡಕುಟುಂಬಗಳನ್ನು ಗುರುತಿಸಿ ಕಿಟ್ ನೀಡಿರುವುದು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದೆ ಎಂದರು.

ಬಳಿಕ ಮಾತನಾಡಿದ ಉದ್ಯಮಿ ಸಹಜ್ ರೈ ಬಳಜ್ಜರವರು ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ವ್ಯಾಪ್ತಿಯ 100 ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಿಸಲಾಗಿದೆ.ಕೋವೀಡ್ ಸಂಕಷ್ಟದ ಸಮಯದಲ್ಲಿ ಯಾರೂ ಕೂಡ ಆಹಾರದ ಕೊರತೆಯಿಂದ ಇರಬಾರದೆಂದು ಈ ಅಳಿಲ ಸೇವೆ ಮಾಡುತ್ತಿದ್ದೇನೆ.ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿಗೆ ಆಹಾರದ ಕಿಟ್ ಕೊಡುವ ಉದ್ದೇಶವಿದ್ದು,ಸರ್ವರ ಸಹಕಾರ ಅಗತ್ಯ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ,ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ,ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ಅಧ್ಯಕ್ಷರಾದ ರಮೇಶ್ ರೈ ಸಾಂತ್ಯ,ಉಪಾಧ್ಯಕ್ಷೆ ಫೌಝೀಯ,ಈಶ್ವರಮಂಗಲ ಹೊರ ಠಾಣೆಯ ಎಎಸ್ಐ ತಿಮ್ಮಯ ಗೌಡ,ಕಾವು ಸಿ.ಎ ಬ್ಯಾಂಕ್ ನಿರ್ದೇಶಕಿ ಮೋಹನಾಂಗಿ ಕೆ.ಬಿ,ನೆಟ್ಟಣಿಗೆ ಮುಡ್ನೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಅಮರನಾಥ್ ಆಳ್ವ,ಗ್ರಾ.ಪಂ ಸದಸ್ಯರು, ಬಿಜೆಪಿ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿರಿದ್ದರು.
ಮಾಜಿ ಗ್ರಾ.ಪಂ ಸದಸ್ಯ ಅಬ್ದುಲ್ ಖಾದರ್ ಸ್ವಾಗತಿಸಿ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಸದಸ್ಯ ರಾಜೇಂದ್ರ ಪ್ರಸಾದ್ ಮೇನಾಲ ವಂದಿಸಿದರು.
ಜಯಹರಿ ಫ್ಯೂಯೆಲ್ ಸ್ಟೇಷನ್ ನ ಸಿಬ್ಬಂದಿಗಳು ಸಹಕರಿಸಿದರು.

Leave A Reply

Your email address will not be published.