ಕರ್ನಾಟಕದಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭ |ಅನ್ ಲಾಕ್ ಭವಿಷ್ಯ ಇಂದು ನಿರ್ಧಾರವಾಗುವ ಸಾಧ್ಯತೆ
ಕೊರೊನಾ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಾಗಿ ಲಾಕ್ಡೌನ್ ಜಾರಿಗೊಳಿಸಿದ್ದಲ್ಲದೆ, ಅದನ್ನು ವಿಸ್ತರಿಸುತ್ತಲೇ ಬಂದಿರುವ ಸರ್ಕಾರ ಇದೀಗ ನಿಧಾನವಾಗಿ ಅನ್ಲಾಕ್ ಪ್ರಕ್ರಿಯೆಯನ್ನು ಆರಂಭಿಸಿದಂತಿದೆ.
ಅದನ್ನು ಸಾಬೀತುಪಡಿಸುವಂತೆ ಒಂದೊಂದೇ ಸೇವೆಗಳು ತೆರೆದುಕೊಳ್ಳುತ್ತಿವೆ. ಇಂದಿನಿಂದ ಅನ್ ಲಾಾಕ್ ಪ್ರಕ್ರಿಯೆ ಪ್ರಾರಂಭವಾಗಿದೆ.
ಅನ್ಲಾಕ್ ಪ್ರಕ್ರಿಯೆಯ ಒಂದು ಹಂತವಾಗಿ, ಕೆಎಸ್ಆರ್ಟಿಸಿ ಸೇವೆಗೆ ಸಜ್ಜಾಗುತ್ತಿದೆ. ಆನ್ಲೈನ್ನಲ್ಲಿ ಮುಂಗಡ ಟಿಕೆಟ್ ಬುಕಿಂಗ್ಗೂ ಅವಕಾಶ ನೀಡಲು ಮುಂದಾಗಿದೆ.
ಸದ್ಯದ ತಿಳಿದ ಪ್ರಕಾರ ಜೂ. 8 ರಿಂದಲೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಲಿದ್ದು, ಆ ಕುರಿತು ಸಿದ್ಧತೆಗಳು ತರಾತುರಿಯಲ್ಲಿ ನಡೆಯುತ್ತಿವೆ ಎನ್ನಲಾಗಿದೆ
ಇದರ ಮತ್ತೊಂದು ಹಂತದ ಅನ್ಲಾಕ್ ಗೋಚರವಾಗಿದೆ.
ಇಂದಿನಿಂದ ರಾಜ್ಯದಲ್ಲಿ ನೋಂದಣಿ ಕಚೇರಿಗಳು ತೆರೆಯಲಿವೆ. ರಾಜ್ಯದಲ್ಲಿರುವ ಎಲ್ಲ ಜಿಲ್ಲಾ ರಿಜಿಸ್ಟ್ರಾರ್ ಮತ್ತು ಸಬ್ ರಿಜಿಸ್ಟ್ರಾರ್ ಕಚೇರಿಗಳು ಇಂದಿನಿಂದ ತೆರೆಯಲಿವೆ.
ಕೋವಿಡ್ ಮಾರ್ಗಸೂಚಿಗಳಿಗೆ ಅನುಸಾರ ಈ ಕಚೇರಿಗಳು ಕಾರ್ಯನಿರ್ವಹಿಸಲಿವೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಕರ್ನಾಟಕದ ಅನ್ ಲಾಕ್ ಭವಿಷ್ಯ ಬಹುತೇಕ ಇಂದು ನಿರ್ಧಾರ !
ಇನ್ನು ಕರ್ನಾಟಕದ ಅನ್ ಲಾಕ್ ಭವಿಷ್ಯ ಇಂದು ನಿರ್ಧಾರವಾಗುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಅಧಿಕಾರಿಗಳ ಸಭೆ ಕರೆದಿದ್ದಾರೆ. ಸಭೆಯಲ್ಲಿ ಅನ್ ಲಾಕ್ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಈ ಹಿಂದೆ ಇದೇ ವಿಚಾರವಾಗಿ ಮಾತನಾಡಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಕೊರೋನಾ ಪಾಸಿಟಿವಿಟಿ ರೇಟ್ ಕಡಿಮೆ ಇರುವ ಕಡೆ ಲಾಕ್ ಡೌನ್ ನ್ನು ಸಡಿಲಿಕೆ ಮಾಡಿ ಅನ್ ಲಾಕ್ ಪ್ರಕ್ರಿಯೆ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಬಗ್ಗೆ ಪ್ರತಿ ಜಿಲ್ಲೆಗಳ ಕೊರೋನಾ ಸ್ಥಿತಿಗತಿ ಬಗ್ಗೆ ಸಚಿವ ಸಂಪುಟದ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.