ಸಿಇಟಿ ಪರೀಕ್ಷೆಗೆ ದಿನ ನಿಗದಿ | ಯಾವಾಗ ನಡೆಯಲಿದೆ ಸಿಇಟಿ ಪರೀಕ್ಷೆ..? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರದ್ದುಪಡಿಸಿರುವುದರಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ. ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದ್ದಾರೆ

ಸಿಇಟಿ ಪರೀಕ್ಷೆ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ನಡೆದ ಸಭೆಯ ನಂತರ, ಆಗಸ್ಟ್‌ 28 ಮತ್ತು 29ರಂದು ಸಿಇಟಿ ನಡೆಯಲಿದೆ ಎಂದು ಅವರು ತಿಳಿಸಿದರು.

ಸಿಇಟಿ ಪರೀಕ್ಞಾ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರತಿ ವಿಷಯ 60 ಅಂಕಗಳ ಪರೀಕ್ಷೆ ಆಗಿರುತ್ತದೆ. ಮೊದಲ ದಿನ ಜೀವ ವಿಜ್ಞಾನ ಮತ್ತು ಗಣಿತ, ಎರಡನೇ ದಿನ ಭೌತ ವಿಜ್ಞಾನ ಮತ್ತು ರಸಾಯನವಿಜ್ಞಾನ ಪರೀಕ್ಷೆ ನಡೆಯಲಿದೆ.

KCET 2021 ಪರೀಕ್ಷೆಯನ್ನು ರಾಜ್ಯಾದ್ಯಂತ  ಸುಮಾರು 500ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಆಗಸ್ಟ್ 28, 29 ಹಾಗೂ 30ರಂದು ನಡೆಸಲಾಗುವುದು.

ಆಗಸ್ಟ್ 28 – ಜೀವಶಾಸ್ತ್ರ, ಗಣಿತ, ಆಗಸ್ಟ್ 29 – ಭೌತಶಾಸ್ತ್ರ, ರಸಾಯನಶಾಸ್ತ್ರ, ಆಗಸ್ಟ್ 30 – ಗಡಿನಾಡು, ಹೊರನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ಇರುತ್ತದೆ, ಪಿಯುಸಿ ಅಂಕಗಳ ವಿಚಾರವಾಗಿ ನೀತಿಯಲ್ಲಿ ಅಗತ್ಯ ತಿದ್ದುಪಡಿ ತರಲಾಗುವುದು ಎಂದಿದ್ದಾರೆ.

ಪದವಿ ಕಾಲೇಜುಗಳಿಗೆ, ಇತರ ಕೋರ್ಸ್‌ಗಳಿಗೆ ಪ್ರವೇಶ ನೀಡುವ ದೃಷ್ಟಿಯಿಂದ ಅಗತ್ಯವಿರುವ ಪೂರ್ವ ಸಿದ್ಧತಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ವಿಜ್ಞಾನ ವಿಭಾಗದ ಡಿಗ್ರಿ ವಿದ್ಯಾರ್ಥಿಗಳ ಪ್ರವೇಶವನ್ನು #CET ಮುಖಾಂತರವೇ ನಿರ್ಧರಿಸುವ ಚಿಂತನೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Leave A Reply

Your email address will not be published.