ದೇಶದಲ್ಲಿ ಇಳಿಕೆಯ ಹಾದಿಯಲ್ಲಿ ಕೊರೋನಾ | ಲಕ್ಷ ದಿಂದ ಸಾವಿರಕ್ಕೆ ಕುಸಿದ ಸಾವಿನ ಸಂಖ್ಯೆ

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯ ಹಾದಿಯಲ್ಲಿ ದಾಪುಗಾಲು ಹಾಕುತ್ತಾ ಮುಂದುವರೆದಿದ್ದು, ಇಂದು ಮಂಗಳವಾರ ಬೆಳಿಗ್ಗೆ ಸಮಯಕ್ಕೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಕೇವಲ 86,498 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದು ಕಳೆದ 62 ದಿನಗಳ ಕನಿಷ್ಠ ಪ್ರಮಾಣವಾಗಿದೆ.

ಅದೇ ರೀತಿ ದೇಶದಲ್ಲಿ ಕೊಂಡು ಬಂದ ಸಾವಿನ ಸಂಖ್ಯೆಯನ್ನು ಕೂಡ ಗಣನೀಯವಾಗಿ ಇಳಿಕೆ ಕಂಡಿದೆ. ಇದೇ ಅವಧಿಯಲ್ಲಿ ಅಂದರೆ ಕಳೆದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 2123 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಪ್ರಮಾಣವು ಕಳೆದ 46 ದಿನಗಳಲ್ಲಿಯೇ ಕನಿಷ್ಠವಾಗಿದೆ.

ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,89,96,473ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,51,309ಕ್ಕೆ ಏರಿಕೆಯಾಗಿದೆ.

ಇನ್ನಷ್ಟು ಅಂಕಿ ಅಂಶಗಳು :

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,03,702

24 ಗಂಟೆಗಳಲ್ಲಿ 1,82,282 ಮಂದಿ ಗುಣಮುಖ

ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,73,41,462

ಇನ್ನು ಭಾರತದಲ್ಲಿ ಒಂದೇ ದಿನ 18,73,485 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ತನಕ ಒಟ್ಟು 36,82,07,596 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ಇಲ್ಲಿಯತನಕ ಭಾರತದ ಜನಸಂಖ್ಯೆಯ 17 ಪರ್ಸೆಂಟ್ ಗಿಂತಲೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 23,61,98,726 (23.61 ಕೋಟಿ ) ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Leave A Reply

Your email address will not be published.