ಮಿಡ್ ನೈಟ್ ಭೀಕರ ರಸ್ತೆ ಅಪಘಾತ | ಡಬ್ಬಲ್ ಡೆಕ್ಕರ್ ಬಸ್ ನಲ್ಲಿದ್ದ 17 ಜನ ಸ್ಪಾಟ್ ಔಟ್
ಕಾನ್ಸುರ(ಉತ್ತರ ಪ್ರದೇಶ): ಬಸ್ ಗೆ ಟೆಂಪೋ
ಡಿಕ್ಕಿ ಹೊಡೆದ ಪರಿಣಾಮ17 ಜನ ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ಕಾನ್ಸುರದ ಸಚೇಂದಿ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.
ಉತ್ತರ ಪ್ರದೇಶ ಸಾರಿಗೆ ಸಂಸ್ಥೆಗೆ ಸೇರಿದ ಡಬಲ್ ಡೆಕ್ಕರ್ ಬಸ್ ಕಾನ್ಸುರದಿಂದ ಅಹಮದಾಬಾದ್ ಗೆ ತೆರಳುತ್ತಿದ್ದಾಗ ಈ ದುರಂತ ನಡೆದಿದೆ.
ಕಿಸಾನ್ ನಗರ ಬಿಸ್ಕೆಟ್ ಫ್ಯಾಕ್ಟರಿಯ ಬಳಿ ವೇಗವಾಗಿ ಸಾಗುತ್ತಿದ್ದ ಬಸ್ ಗೆ ಟೆಂಪೋ ಅಡ್ಡ ಬಂದಿದೆ. ಹಾಗಾಗಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಆಗ ಬಸ್ ನಲ್ಲಿದ್ದ 17 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹಲವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಹಿನ್ನೆಲೆಯಲ್ಲಿ ಹಲವು ಕಿ.ಮೀ.ನಷ್ಟು ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಈ ದುರ್ಘಟನೆ ಬಗ್ಗೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಗಳನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.
ಯೋಗಿ ಆದಿತ್ಯನಾಥ್ ಕೂಡ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ. ಘೋಷಿಸಿದ್ದು, ಘಟನೆ ಬಗ್ಗೆ ತನಿಖೆಗೆ ಆದೇಶ ನೀಡಿದ್ದಾರೆ.