ಮಂಗಳೂರು : ದಂಪತಿ ಆತ್ಮಹತ್ಯೆ ಶಂಕೆ ,ಬಾವಿಯಲ್ಲಿ ಪತಿಯ ಶವ,ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿಯ ಶವ ಪತ್ತೆ

ಮಂಗಳೂರು: ಕದ್ರಿ ಪಿಂಟೊ ಲೇನ್ ನಿವಾಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಬುಧವಾರ ಬೆಳಕಿಗೆ ಬಂದಿದೆ.

ಕದ್ರಿ ಪಿಂಟೋ ಲೇನ್ ನಿವಾಸಿಗಳಾದ ಸುರೇಶ್ ಮತ್ತು ವಾಣಿ ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಸುರೇಶ್ ಬಾವಿಗೆ ಹಾರಿದರೆ, ವಾಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಬುಧವಾರ ಮುಂಜಾನೆ ಸುರೇಶ್ ಬಾವಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದು, ಅವರ ಪತ್ನಿ ವಾಣಿ ನೇಣಿಗೆ ಶರಣಾಗಿದ್ದಾರೆ. ಮೃತರು ಓರ್ವ ಮಗನನ್ನು ಅಗಲಿದ್ದಾರೆ.

ವ್ಯವಹಾರ ನಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದಾರೆ.

Leave A Reply

Your email address will not be published.