ದ.ಕ.ಜಿಲ್ಲಾಡಳಿತ ನಿಯಮ ಉಲ್ಲಂಘನೆ | 78 ಅಂಗಡಿಗಳಿಗೆ ದಂಡ,30 ಅಂಗಡಿಗಳ ಲೈಸೆನ್ಸ್ ರದ್ದು
ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತದ ಮಾರ್ಗಸೂಚಿಯನ್ನು ಉಲ್ಲಂಘಣೆ ಮಾಡಿ ವ್ಯಾಪಾರ ವಹಿವಾಟು ನಡೆಸಿದ 78 ಅಂಗಡಿಗಳಿಗೆ 68,350 ರೂ. ದಂಡ ವಿಧಿಸಲಾಗಿದ್ದು, ಇದರ ಪೈಕಿ 30 ಅಂಗಡಿಗಳ ಲೈಸೆನ್ಸ್ ರದ್ದು ಮಾಡಲಾಗಿದೆ.
ದ.ಕ.ಜಿಲ್ಲಾಡಳಿತದ ಮಾರ್ಗಸೂಚಿಗಳನ್ವಯ ಬೆಳ್ಳಗೆ 6 ರಿಂದ 10 ಗಂಟೆಯವೆರೆಗೆ ದಿನನಿತ್ಯದ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿತ್ತು.
ಆದರೆ ಕೆಲವು ಸಂದರ್ಭಗಳಲ್ಲಿ ಅನುಮತಿಸದೆ ಇರುವ ವಸ್ತುಗಳ ಅಂಗಡಿಗಳನ್ನು ಅನಧಿಕೃತವಾಗಿ ತೆರೆದು ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪಾಲಿಕೆಯ ವಿವಿಧ ತಂಡಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕೋವಿಡ್ 19 ಮಾರ್ಗಸೂಚಿ ಉಲ್ಲಂಘಿಸಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ 78 ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ.
ಬೆಳಗ್ಗೆ 10 ಗಂಟೆಯ ಅವಧಿ ಮೀರಿ ಕೋವಿಡ್ 19 ಮಾರ್ಗಸೂಚಿಯನ್ನು ಉಲ್ಲಂಘಿಸಿ ಸಾರ್ವಜನಿಕರು ಅನಗತ್ಯ ಸಂಚರಿಸುತ್ತಿರುವವರನ್ನು ತಪಾಸಣೆ ನಡೆಸಿದಾಗ ಅನಗತ್ಯ ಓಡಾಟ ಮಾಡಿದ 19 ಪ್ರಕರಣಗಳಿಗೆ 8050 ರೂ. ದಂಡವನ್ನು ವಿಧಿಸಿ ಎಚ್ಚರಿಕೆ ನೀಡಲಾಗಿದೆ.