ಮೊಬೈಲ್‌ನಲ್ಲಿ ಮಾತಾಡುತ್ತಿದ್ದ ಮಗಳನ್ನು ಪ್ರಶ್ನಿಸಿದ ತಾಯಿ | ಮನೆ ಬಿಟ್ಟು ಹೋದ ಮಗಳು,ಪೊಲೀಸರಿಗೆ ದೂರು
ಮಂಗಳೂರು : ಮೊಬೈಲ್‌ನಲ್ಲಿ ಮಾತನಾಡುತ್ತಿರುವುದನ್ನು ತಾಯಿ ಪ್ರಶ್ನಿಸಿದಕ್ಕೆ ಬಾಲಕಿಯೋರ್ವಳು ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ಸೈಟ್ ನಲ್ಲಿದ್ದ ಕುಮಾರಿ ದೀಕ್ಷಾ (18) ನಾಪತ್ತೆಯಾದಾಕೆ.
ಈ ಕುರಿತು ಬಾಲಕಿಯ ತಾಯಿ ಮೀನಾಕ್ಷಿ ಅವರು ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.
ಜು.6 ರಂದು ಮೀನಾಕ್ಷಿ ಅವರು ಬೆಳಿಗ್ಗೆ ಮುಡಿಪು ಪೇಟೆಗೆ ಮಗನ ಜೊತೆಗೆ ತೆರಳಿದ್ದು,ಈ ವೇಳೆ ಮನೆಯಿಂದ ನಾಪತ್ತೆಯಾಗಿದ್ದಾಳೆ.
ದೀಕ್ಷಾ ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿದ್ದುದನ್ನು ತಾಯಿ ಪ್ರಶ್ನಿಸಿದ್ದರು. ಇದೇ ಕಾರಣವನ್ನು ಮುಂದಿಟ್ಟುಕೊಂಡು ಬಾಲಕಿ ನಾಪತ್ತೆಯಾಗಿರುವ ಸಾಧ್ಯತೆ ಇದೆ ಎಂದು ದೂರು ದಾಖಲಿಸಿದ್ದಾರೆ.