ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಳ್ಳುವವರೆಗೂ ಪ್ರಥಮ ಪಿಯುಸಿ ದಾಖಲಾತಿ ಮಾಡುವಂತಿಲ್ಲ

ಬೆಂಗಳೂರು : ರಾಜ್ಯದಲ್ಲಿ 2021-22ನೇ ಸಾಲಿನ ಪ್ರಥಮ ಪಿಯುಸಿ ತರಗತಿಗೆ ವಿದ್ಯಾರ್ಥಿಗಳನ್ನು 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಬಂದ ನಂತರವೇ ದಾಖಲಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಖಡಕ್ ಆಗಿ ಆದೇಶಿಸಿದೆ.

ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ
ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲೆಗಳ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸುತ್ತೋಲೆ ಹೊರಡಿಸಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆಯು ದಾಖಲಾತಿ ಮಾರ್ಗಸೂಚಿ 2021-22 ಬಿಡುಗಡೆ ಮಾಡಿದ ನಂತರವೇ ದಾಖಲಾತಿ ಮಾಡಿಕೊಳ್ಳಲು ತಿಳಿಸಿದೆ.

ಅಲ್ಲಿಯವರೆಗೂ ಯಾವುದೇ ರೀತಿಯಲ್ಲಿ ಪ್ರಥಮ ಪಿಯುಸಿಗೆ ದಾಖಲಾತಿ ನೀಡುವಂತಿಲ್ಲ ಹಾಗೂ ಆನ್ ಲೈನ್ ತರಗತಿಗಳನ್ನು ಸಹ ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ.

ಹೀಗಿದ್ದೂ ಯಾವುದೇ ಕಾಲೇಜುಗಳಲ್ಲಿ ಪ್ರಥಮ ಪಿಯುಸಿಗೆ ದಾಖಲಾತಿಗಳು ನಡೆಸಿದ ಬಗ್ಗೆ ಹಾಗೂ ಆನ್ ಲೈನ್ ತರಗತಿಗಳು ನಡೆಸುತ್ತಿರುವ ಬಗ್ಗೆ ಇಲಾಖೆಯ ಗಮನಕ್ಕೆ ಬಂದಲ್ಲಿ, ಸಂಬಂಧಿಸಿದ ಕಾಲೇಜುಗಳ ಮೇಲೆ ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ. ಅಲ್ಲದೇ ಆ ಕಾಲೇಜುಗಳ ಮಾನ್ಯತೆ ರದ್ದು ಪಡಿಸಲು ಕ್ರಮವಹಿಸಲಾಗುವುದು ಎಂಬುದಾಗಿ ಎಚ್ಚರಿಕೆ ನೀಡಿದೆ.

Leave A Reply

Your email address will not be published.