ಹಾಸನದಲ್ಲಿ ಲಾರಿಗೆ ಕಾರು ಡಿಕ್ಕಿ | ಬೆಳ್ತಂಗಡಿಯ ಇಬ್ಬರು ಸಹೋದರರ ಸಹಿತ ಮೂವರು ಸಾವು,ಓರ್ವ ಗಂಭೀರ

ಲಾರಿಗೆ ಕಾರೊಂದು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಬೆಳ್ತಂಗಡಿ ಮೂಲದ ಇಬ್ಬರು ಸಹೋದರರ ಸಹಿತ ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಓರ್ವನ‌ ಸ್ಥಿತಿ ಗಂಭೀರ ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕುತ್ರಬೆಟ್ಟು ಮನೆಯ ದಿ.ಗಣಪ ಗೌಡರ ಮಕ್ಕಳಾದ ಜಯಪ್ರಕಾಶ್(25) , ಯೋಗಿಶ್(23) ಎಂದು ಗುರುತಿಸಲಾಗಿದೆ.ಇನ್ನುಳಿದ ಇಬ್ಬರ ಗುರುತು ಪತ್ತೆಯಾಗಿಲ್ಲ.

ಹೀಗಾಗಿ ಪೊಲೀಸರು ಗುರುತನ್ನು ಪತ್ತೆ ಹಚ್ಚುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುವನ್ನು ಹಾಸನದ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೆಎ-19 ಎಂಜಿ 7021 ನಂಬರಿನ ಕ್ವಿಡ್ ಕಾರಿನಲ್ಲಿ ನಾಲ್ಕು ಜನ ಪ್ರಯಾಣಿಸುತ್ತಿದ್ದು, ಕೆಂಚಟ್ಟಹಳ್ಳಿ ಬಳಿ ಹಂಪ್ಸ್ ಇದ್ದ ಕಾರಣ ಲಾರಿ ಚಾಲಕ ದಿಢೀರ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಲಾರಿ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣಕ್ಕೆ ಸಿಗದೆ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.