Ad Widget

ಮುಂಬೈ : ಧರೆಗುರುಳಿದ ಕಟ್ಟಡ,11 ಮಂದಿ ಸಾವು | 7 ಮಂದಿ ಗಂಭೀರ

ನಾಲ್ಕು ಮಹಡಿಯ ಕಟ್ಟಡವೊಂದು ಧರೆಗುರುಳಿದ ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿದ ಘಟನೆ ಮುಂಬೈನ ಪಶ್ಚಿಮ ಮಲಾಡ್ ನ ಮಾಲ್ವಾನಿ ಪ್ರದೇಶದಲ್ಲಿ ನಡೆದಿದೆ.

ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಘಟನೆಯಿಂದ 11 ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದು ನಾಲ್ಕು ಮಹಡಿಯ ವಸತಿ ಕಟ್ಟಡವಾಗಿದ್ದು, ದುರ್ಘಟನೆ ನಡೆದ ಸಂದರ್ಭದಲ್ಲಿ ಮಕ್ಕಳು ಸೇರಿದಂತೆ ಹಲವು ಮಂದಿ ಇಲ್ಲಿದ್ದರು.

ಘಟನೆ ನಡೆದ ಕೆಲವೇ ಕ್ಷಣದಲ್ಲಿ ಅಗ್ನಿ ಶಾಮಕ ದಳ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಒಳಗೆ ಸಿಲುಕಿಕೊಂಡವರನ್ನು ರಕ್ಷಣೆ ಮಾಡಲಾಗಿದೆ.

Leave a Reply

error: Content is protected !!
Scroll to Top
%d bloggers like this: