ರಾಜ್ಯದಲ್ಲಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷತೆ ಬದಲಿಲ್ಲ – ಅರುಣ್ ಸಿಂಗ್ ಖಡಕ್ ಹೇಳಿಕೆ

Share the Article

ರಾಜ್ಯದಲ್ಲಿ ಆರಂಭವಾಗಿರುವ ಸಿಎಂ ಬದಲಾವಣೆ ಚರ್ಚೆಯ ನಡುವೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಖಡಕ್ ಸೂಚನೆ ಎಲ್ಲಾ ಚರ್ಚೆಗೆ ತೆರೆ ಎಳೆದಿದೆ.

ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿರುವ ಅರುಣ್ ಸಿಂಗ್ ಅವರು, ಜೂನ್ 17 ಅಥವಾ 18 ರಿಂದ ಮೂರು ದಿನ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು, ಈ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಲಾಗುವುದು ಎಂದಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಎಂಬುದು ಕೇವಲ ಗಾಳಿ ಸುದ್ದಿ ಪಕ್ಷದ ಕಡೆಯಿಂದ ಅಂತಹ ಯಾವುದೇ ಸಾಧ್ಯತೆ ಇಲ್ಲ ಎಂದರು.

ಅಲ್ಲದೆ ನಾಯಕತ್ವದ ಬದಲಾವಣೆ ಹಾಗೂ ಪಕ್ಷದ ನಾಯಕರ ಕುರಿತು ಬಹಿರಂಗ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ.

Leave A Reply