ಪ್ರಥಮ ಪಿಯುಸಿ ಪರೀಕ್ಷೆ ನಡೆಸಲು ಮತ್ತೆ ನಿರ್ಧಾರ

ಬೆಂಗಳೂರು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪಿಯು ಬೋರ್ಡ್ ದಿಢೀರ್ ಹೈ ವೋಲ್ಟೇಜ್ ಶಾಕ್ ನೀಡಿದ್ದು, ವಿದ್ಯಾರ್ಥಿಗಳಿಗೆ ಆ ನ್ ಲೈನ್ ನಲ್ಲಿ ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ.

ಈ ಬಾರಿ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆಯಿಲ್ಲದೆಯೇ ಪಾಸ್ ಮಾಡುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಹಿಂದೆ ತಿಳಿಸಿದ್ದರು.

ಆದರೆ ಈಗ ಪಿಯು ಬೋರ್ಡ್ ಆನ್ ಲೈನ್ ಪರೀಕ್ಷೆ ಘೋಷಿಸಿದ್ದು, ಎರದು ವಿಷಯಗಳಿಗೆ ಪರೀಕ್ಷೆ ನಡೆಸುವುದಾಗಿ ತಿಳಿಸಿ, ಎಲ್ಲಾ ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಿದೆ.

ಈಗಾಗಲೇ ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿರುವ ಪಿಯು ಬೋರ್ಡ್, ಕಾಲೇಜುಗಳಿಗೆ ಆನ್ ಲೈನ್ ಪರೀಕ್ಷೆ ನಡೆಸುವಂತೆ ಸೂಚಿಸಿದೆ. ಪಿಯು ಬೋರ್ಡ್ ವೆಬ್ ಸೈಟ್ ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿದ್ದು, ವಿದ್ಯಾರ್ಥಿಗಳು ಅದನ್ನು ಡೌನ್ ಲೋಡ್ ಮಾಡಿಕೊಂಡು ಉತ್ತರ ಬರೆದು ಕಳುಹಿಸಬೇಕು ಎಂದು ತಿಳಿಸಿದೆ.

Leave A Reply

Your email address will not be published.