ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರ ಹಾಗೂ ಕ್ಲಿನರ್ ಗಳ ಸ್ಥಿತಿ ಗಂಭೀರ

ವಿಜಯಪುರ : ಬಿಸ್ಕೆಟ್ ತುಂಬಿದ ಲಾರಿ ಹಾಗೂ ಕಬ್ಬಿಣ ಸಲಾಕೆ ತುಂಬಿದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಲಾರಿಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿ ಚಾಲಕರು ಹಾಗೂ ಕ್ಲಿನರ್ ಗಳು ಗಂಭೀರ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕಾರಜೋಳ ಕ್ರಾಸ್ ಬಳಿ ನಡೆದಿದೆ.

ಹುಬ್ಬಳ್ಳಿಯಿಂದ ಬಿಸ್ಕೆಟ್ ಬಾಕ್ಸ್ ಗಳನ್ನು ಹೊತ್ತು ವಿಜಯಪುರದತ್ತ ಹೊರಟಿದ್ದ ಲಾರಿ, ಎದುರಿಗೆ ಬರುತ್ತಿದ್ದ ಕಬ್ಬಿಣ ಸಲಾಕೆ ತುಂಬಿದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಘಟನೆಯಲ್ಲಿ ಗಾಯಗೊಂಡಿದ್ದ ಎರಡೂ ಲಾರಿಯ ಚಾಲಕರು ಹಾಗೂ ಕ್ಲೀನರ್ ಗಳನ್ನು ಸ್ಥಳೀಯರ ನೆರವಿನಿಂದ ಲಾರಿಗಳಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

Leave A Reply

Your email address will not be published.