ನೆಲ್ಯಾಡಿ : ಕಾರು ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ
ನೆಲ್ಯಾಡಿ: ಕಾರು ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಮಾರುತಿ ಸುಝುಕಿ ಎರ್ಟಿಗಾ ಕಾರು ನಡುವೆ ಎಂಜಿರ ಸಮೀಪ ಮುಖಾಮುಖಿ ಢಿಕ್ಕಿಯಾಗಿದೆ.
ಘಟನೆಯಲ್ಲಿ ಕಾರಿನ ಮುಂಭಾಗ ಭಾಗಶಃ ಹಾನಿಯಾಗಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.