ರಸ್ತೆ ಅಪಘಾತ | ಚಿತ್ರ ನಟ ಸಂಚಾರಿ ವಿಜಯ್ ಚಿಂತಾಜನಕ

ಬೆಂಗಳೂರು: ರಸ್ತೆ ಅಪಘಾತವೊಂದರಲ್ಲಿ ಚಿತ್ರನಟ ಸಂಚಾರಿ ವಿಜಯ್ ಅವರಿಗೆ ಗಂಭೀರ ಗಾಯವಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.

ಬೈಕ್ ನಲ್ಲಿ ಸ್ನೇಹಿತರ ಜೊತೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಇದರಿಂದ ವಿಜಯ್ ಅವರ ಮೆದುಳಿನ ಭಾಗದಲ್ಲಿ ತೀವ್ರವಾಗಿ ರಕ್ತಸ್ರಾವ ವಾಗಿದೆ.
ಬನ್ನೇರು ಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾನು ಅವನಲ್ಲ ಅವಳು ಚಿತ್ರದ ನಟನೆಗೆ ವಿಜಯ್ ರಾಷ್ಟ್ರಪ್ರಶಸ್ತಿ ಪಡೆದುಕೊಂಡಿದ್ದರು. ಒಗ್ಗರಣೆ, ದಾಸವಾಳ, ಸಿಪಾಯಿ, ಜಂಟಲ್ ಮ್ಯಾನ್ ಮೊದಲಾದ ಚಿತ್ರಗಳಲ್ಲಿ ನಟಿಸಿದ್ದಾರೆ.

Leave A Reply

Your email address will not be published.