ಬಂಟ್ವಾಳ | ಚಿಕ್ಕಪ್ಪನಿಂದ ಕಾಲೇಜು ಯುವತಿಯ ಮೇಲೆ ನಿರಂತರ ಅತ್ಯಾಚಾರ
ಬಂಟ್ವಾಳ: ಚಿಕ್ಕಪ್ಪನಿಂದಲೇ ಬೆದರಿಕೆ ಹಾಕಿ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಪುರುಷೋತ್ತಮ ಎಂಬಾತ ಪ್ರಕರಣ ಆರೋಪಿ. ಈತ ಪತ್ನಿಯ ಅಕ್ಕನ ಮಗಳ ಮೇಲೆಯೇ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ ಎಂದು ಆ ಕಾಲೇಜು ವಿದ್ಯಾರ್ಥಿನಿ ದೂರು ನೀಡಿದ್ದಾಳೆ.
ಒಂದು ವೇಳೆ ಈ ವಿಚಾರವನ್ನು ಮನೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಮನೆಯವರನ್ನು ಕೂಡಾ ಸುಮ್ಮನೆ ಬಿಡುವುದಿಲ್ಲ ಎಂದು ಹೆದರಿಸುತ್ತಿದ್ದ ಎಂದು ಯುವತಿ ಪೊಲೀಸರಿಗೆ ನೀಡಿದ ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾಳೆ. ಆತನ ಬೆದರಿಕೆಗೆ ಹೆದರಿದ ಹುಡುಗಿ ಸುಮ್ಮನಿದ್ದಳು. ಇತ್ತೀಚೆಗೆ ಆತನ ಟಾರ್ಚ್ ರ್ ಜಾಸ್ತಿ ಆದ ಹಿನ್ನೆಲೆಯಲ್ಲಿ ಆಕೆ ಮನೆಯವರಲ್ಲಿ ತಿಳಿಸಿದ್ದಾಳೆ.
ಕಳೆದ ಒಂದು ವರ್ಷದಿಂದ ಯುವತಿ ಬಿ.ಸಿ. ರೋಡು ಸಂಬಂಧಿಕರ ಮನೆಯಿಂದ ಕಾಲೇಜು ಹೋಗುತ್ತಿದ್ದು, ಅಲ್ಲೇ ಆರೋಪಿ ಪುರುಷೋತ್ತಮ ಕೂಡ ವಾಸವಾಗಿದ್ದ.
ಆರೋಪಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಅವಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡುತ್ತಲೇ ಬಂದಿದ್ದಾನೆ. ಈತನ ಹಿಂಸೆ ತಡೆಯಲಾಗದೆ ಮನೆಯವರಿಗೆ ತಿಳಿಸಿ ಯುವತಿ ಠಾಣೆಗೆ ದೂರು ನೀಡಿದ್ದಾಳೆ. ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.