ಕಲ್ಲಡ್ಕ | ಆಂಬುಲೆನ್ಸ್, ಟ್ಯಾಂಕರ್, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆಂಬ್ಯುಲೆನ್ಸ್ ನಲ್ಲಿದ್ದ ಐದು ಮಂದಿಗೆ ಗಾಯ

ಟ್ಯಾಂಕರ್, ಅಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದ ಭೀಕರ ಅಪಘಾತದಲ್ಲಿ ಐವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

ಮಡಿಕೇರಿ ಕಡೆಯಿಂದ ಮಂಗಳೂರು ಆಸ್ಪತ್ರೆಗೆ ರೋಗಿಯನ್ನು ಕರೆತರುತ್ತಿದ್ದ ಅಂಬ್ಯುಲೆನ್ಸ್ ಹಾಗೂ ಟ್ಯಾಂಕರ್ ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದೆ.

ಅಂಬ್ಯುಲೆನ್ಸ್ ನಲ್ಲಿದ್ದ ನಾಲ್ವರಿಗೂ ಗಾಯಗಳಾಗಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ಆದರೆ ಅಂಬ್ಯುಲೆನ್ಸ್ ವಾಹನದಲ್ಲಿದ್ದ ಯಾರಿಗೆ ಗಂಭೀರ ಗಾಯವಾಗಿದೆ ಎಂಬ ಮಾಹಿತಿ ತಿಳಿದುಬಂದಿಲ್ಲ. ಬೈಕ್ ಸವಾರನಿಗೂ ಗಾಯವಾಗಿದ್ದು, ಆತನ ಬಗ್ಗೆಯೂ ಸ್ಪಷ್ಟವಾದ ಮಾಹಿತಿ ಲಭಿಸಿಲ್ಲ.

ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave A Reply

Your email address will not be published.